Sun 17 Dec 2017, 1:46PM

ಹೆಚ್ಚಿನ ಸುದ್ದಿಗಳು

ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ: ಚಿಣ್ಣರ ಕಲರವ

Thursday, January 12th, 2017 | Suddi Belthangady | no responses

patturu chinnara kalavara copyಪಟ್ಟೂರು : ಶ್ರೀ ರಾಮ ವಿದ್ಯಾಸಂಸ್ಥೆ ಪಟ್ಟೂರು ಇಲ್ಲಿನ ವಾರ್ಷಿಕೋತ್ಸವ ಚಿಣ್ಣರ ಕಲರವ 2016-17 ಈ ಕಾರ್ಯಕ್ರಮವು ಡಿ.31 ರಂದು ನಡೆಯಿತು.
ಬೆಳಿಗ್ಗೆ ಶ್ರೀ ರಾಮ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ನಾರಾಯಣ ಶಬರಾಯ ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಡ್ವ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪಟ್ರಮೆ ಗ್ರಾ.ಪಂ. ಉಪಾಧ್ಯಕ್ಷೆ ಬಾಬಿ, ಶ್ರೀರಾಮ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ ಶೆಟ್ಟಿ ದೇರಾಜೆ, ಸದಸ್ಯರುಗಳಾದ ನಾರಾಯಣ ಶಬರಾಯ , ಶಿವರಾಮಭಟ್ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಸೌಮ್ಯಶ್ರೀ ಕೆ. ಆರ್.ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕಿ ಗುಣವತಿ ಕೆ.ಎನ್. ವಂದಿಸಿದರು. ಶಿಕ್ಷಕಿ ಕೋಮಲಾಂಗಿ ಕೆ. ನಿರೂಪಿಸಿದರು.
ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ. ಪ್ರಭಾಕರ ಭಟ್ ಇವರು ಸಂಜೆ ನಡೆದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಹೃದಯವಂತನಾಗಲು ಸಾಧ್ಯವೆಂದು ಸಂಸ್ಕಾರಯುತ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಶ್ರೀರಾಮ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಡ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮಾಜಿ ಸೈನಿಕ ಕೃಷ್ಣ ಸ್ವಾಮಿ ಬಿ.ಎಸ್., ಪಿಡಬ್ಲ್ಯುಡಿ ಗುತ್ತಿಗೆದಾರ ಪ್ರಕಾಶ್ ಟಿ. ಪಿಲಿಕ್ಕಭೆ, ಕಡಬ ಸರಸ್ವತೀ ವಿದ್ಯಾಲಯ ಸಂಚಾಲಕ ವೆಂಕಟ್ರಮಣ ರಾವ್, ಪಟ್ರಮೆ ಗ್ರಾ.ಪಂ. ಅಧ್ಯಕ್ಷ ನವೀನ್ ಕಜೆ, ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ದೇರಾಜೆ ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಚೆಂಡೆ ವಾದನದ ಮೂಲಕ ವೇದಿಕೆಗೆ ಕರೆತಂದು ದೀಪ ಪ್ರಜ್ವಲನ ಮಾಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಗೋಪೂಜೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸಂಸ್ಥೆಯ ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ ನಡೆಯಿತು. ಶಾಲಾ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕ ಉಮೇಶ್ ಬಿ. ವರದಿ ವಾಚಿಸಿದರು. ಪುರಂದರ ಕಡಿರ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಲಾ ವೈಭವಗಳು ಜರಗಿತು. ಪ್ರಾಥಮಿಕ ವಿಭಾಗದ ಶಿಕ್ಷಕಿ ಗೀತಾ ಕೆ ಸಾಂಸ್ಕೃತಿಕ ಕಲಾ ವೈಭವದ ನಿರೂಪಣೆ ಗೈದರು. ಮುಖ್ಯ ಶಿಕ್ಷಕ ಚಂದ್ರಶೇಖರ್ ಶೇಟ್ ವಂದಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top