Tue 12 Dec 2017, 10:09PM

ಹೆಚ್ಚಿನ ಸುದ್ದಿಗಳು

ಕೆರೆಗಳ ಸಂರಕ್ಷಣೆಯಲ್ಲಿ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ : ಡಾ| ಹೆಗ್ಗಡೆ

Saturday, June 10th, 2017 | suddiblt | no responses

DARAVADA 2

DARAVADA 3

DARAVADA

DARAVADA 1

 

ಪ್ರಾಕೃತಿಕವಾಗಿ ಲಭ್ಯವಿರುವ ಸಂಪನ್ಮೂಲಗಳ ಅತಿಯಾದ ಬಳಕೆಯಿಂದ ಪ್ರಾಕೃತಿಕ ಅಸಮತೋಲನ ತಲೆದೋರಿದ ಪರಿಣಾಮ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಪ್ರಾಕೃತಿಕ ಸಂಪನ್ಮೂಲಗಳ ಪೈಕಿ ನೀರು ಅತ್ಯಂತ ಅಮೂಲ್ಯವಾದುದು. ಆದುದರಿಂದ ನೀರಿನ ಎಚ್ಚರಿಕೆಯ ಬಳಕೆಯ ವಿಚಾರದಲ್ಲಿ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು. ನಮ್ಮ ಪೂರ್ವಜರಲ್ಲಿ ಕೆರೆ ಹೂಳೆತ್ತುವ ಜವಾಬ್ದಾರಿ ಸ್ಥಳೀಯರದ್ದು ಎಂಬ ಭಾವನೆ ಇತ್ತು ಗ್ರಾಮಸ್ಥರೆಲ್ಲ ಸೇರಿ ಕೆರೆಗಳ ಹೂಳೆತ್ತಿ ಕೆರೆಯನ್ನು ಸಂರಕ್ಷಣೆ ಮಾಡುತ್ತಿದ್ದರು. ಆದರೆ ಕಾಲ ಬದಲಾದಂತೆ ಕೆರೆ ಹೂಳೆತ್ತುವ ಹಾಗೂ ಸಂರಕ್ಷಿಸುವ ಜವಾಬ್ದಾರಿ ಸರಕಾರದ್ದು ಎಂಬ ಧೋರಣೆ ಗ್ರಾಮಸ್ಥರಲ್ಲಿ ಮೂಡಿದೆ. ಈ ಧೋರಣೆ ಬದಲಾಗಬೇಕು. ಸಾರ್ವಜನಿಕ ಸಂಘ ಸಂಸ್ಥೆಗಳು, ಉದ್ಯಮಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಆರ್ಥಿಕವಾಗಿ ಸಂಪನ್ನರಾದವರು ಸ್ವಯಂ ಪ್ರೇರಣೆಯಿಂದ ಕೆರೆಗಳ ಸಂರಕ್ಷಣೆಯಲ್ಲಿ ಗ್ರಾಮಸ್ಥರಿಗೆ ಸಹಾಯಹಸ್ತ ಚಾಚಬೇಕಾದ್ದು ಇಂದಿನ ಅವಶ್ಯಕತೆಯಾಗಿದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕರೆ ನೀಡಿದರು. ಅವರು ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಹುಗ್ಗಿ ಕೆರೆ ಕಾಮಗಾರಿಯ ಹಸ್ತಾಂತರವನ್ನು ನೆರೆವೇರಿಸಿ ಮಾತನಾಡುತ್ತಿದ್ದರು.

ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಶ್ರೀಮತಿ ಮಂಜುಳಾ ಕೋಟಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ಎನ್. ಜಯಶಂಕರ ಶರ್ಮ, ಜಿಲ್ಲಾ ಪಂಚಾಯತ್ ಸದಸ್ಯ ನಿಂಗಪ್ಪ ಮಾ. ಘಾಟಿನ, ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಪಕ್ಕೀರವ್ವ ನಾಯಕ, ಕೆರೆಅಭಿವೃದ್ಧಿ ಸಮಿತಿಅಧ್ಯಕ್ಷ ಸುರೇಶ ಗೌಡ ಕರಿಗೌಡರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯೋಜನಾಧಿಕಾರಿ ಉಲ್ಲಾಸ ಮೇಸ್ತ ಕಾರ್ಯಕ್ರಮ ನಿರೂಪಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top