Fri 13 Oct 2017, 11:55AM

ಹೆಚ್ಚಿನ ಸುದ್ದಿಗಳು

ಮಹರ್ಷಿ ವಾಲ್ಮೀಕಿ ಜಯಂತಿ-ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ರಾಮರಾಜ್ಯದ ಕಲ್ಪನೆ ಕೊಟ್ಟವರು ಮಹರ್ಷಿ ವಾಲ್ಮೀಕಿಯವರು : ಮಠಂದೂರು

Thursday, October 12th, 2017 | Suddi Belthangady | no responses

BJP valmiki jayanthiಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಹಾಗೂ ಎಸ್.ಟಿ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳ 100 ಮಂದಿ ಸಾಧಕರನ್ನು ಗುರುತಿಸಿ ಗೌರವಿಸುವುದರೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೫ರಂದು ಸುವರ್ಣ ಆರ್ಕೇಡ್ ಸಭಾ ಭವನ ಬೆಳ್ತಂಗಡಿಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳ ನೂರು ಮಂದಿ ಸಾಧಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗಣ್ಯ ಅತಿಥಿಗಳನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾ.ಜ.ಪ. ದ.ಕ. ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅವರು ಮಾತನಾಡಿ, ಕೃಷಿ ಮತ್ತು ಋಷಿ ಈ ದೇಶದ ಅಂತಸತ್ವ, ಇವರನ್ನು ಗೌರವಿಸುವ ಸಮಾಜ ನಮ್ಮದು, ರಾಮಾಯಾಣ ನಾವು ಹೇಗೆ ಬದುಕಬೇಕೆಂದು ವಿಶ್ವಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾ ಗಿದೆ. ಈ ದೇಶದ ಬದುಕು, ಸಂಸ್ಕೃತಿ, ರಾಮಾಧಾರಿತ ರಾಜಕಾರಣ ಹೇಗಿರ ಬೇಕು ಎಂಬುದನ್ನು ರಾಮಾಯಾಣದ ಮೂಲಕ ನಮಗೆ ದೊರೆಯುತ್ತದೆ. ರಾಮ ರಾಜ್ಯದ ಕಲ್ಪನೆ ಕೊಟ್ಟವರು ಮಹರ್ಷಿ ವಾಲ್ಮೀಕಿಯವರು ಮಹಾತ್ಮಾ ಗಾಂಧಿಯವರು ರಾಮರಾಜ್ಯದ ಕನಸು ಕಂಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವತ್ತಾ ಸಾಗುತ್ತಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿ ಸಿದ್ದ ವಿಭಾಗ ಸಹ ಪ್ರಭಾರಿ ನ್ಯಾಯವಾದಿ ಪ್ರತಾಪಸಿಂಹ ನಾಯಕ್ ಅವರು ಮಾತನಾಡಿ, ವಾಲ್ಮೀಕಿಯವರು ಕಾಡಿನಲ್ಲಿ ಜೀವಿಸಿದರೂ ಜೀವನದ ಅರ್ಥವನ್ನು ಕಂಡುಕೊಂಡವರು, ರಾಮಾಯಾಣ ಮಹಾಕಾವ್ಯದ ಮೂಲಕ ಜಗತ್ತಿಗೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ ಮಾತನಾಡಿ ನೂರು ಮಂದಿ ಸಾಧಕರನ್ನು ಗುರುತಿಸುವು ದರೊಂದಿಗೆ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಇದು ಹಿಂದೂ ಸಮಾಜಕ್ಕೆ ಶಕ್ತಿ ಕೊಡುವ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ ದರು. ಮಾಜಿ ಶಾಸಕ ಪ್ರಭಾಕರ ಬಂಗೇರ ಮಾತನಾಡಿ ಜಗತ್ತಿಗೆ ಜೀವನ ಸಂದೇಶ ನೀಡಿದ ವಾಲ್ಮೀಕಿಯವರ ಸಂದೇಶದಂತೆ ನಾವು ಬದುಕು ಸಾಗಿಸಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ರಂಜನ್ ಗೌಡ ವಾಲ್ಮೀಕಿ ಸಮಾಜ ದವರನ್ನು ಗುರುತಿಸುವ ಕೆಲಸವನ್ನು ಇದುವರೆಗೆ ಯಾರೂ ಮಾಡಿಲ್ಲ ಭಾಜಪ ಇದನ್ನು ಮಾಡಿ ತೋರಿಸಿದೆ ಎಂದರು. ಎಸ್.ಕೆ.ಡಿ.ಆರ್.ಡಿ.ಪಿ.ಯ ಕೃಷಿ ಮೇಲ್ವಿಚಾರಕ ಉಮೇಶ್ ನಾಯ್ಕ ಕೇಳ್ದಡ್ಕ ವಾಲ್ಮೀಕಿ ಮಹರ್ಷಿಯವರು ಜೀವನದ ಬಗ್ಗೆ ಪ್ರಧಾನ ಭಾಷಣ ಮಾಡಿದರು. ಬೆಳ್ತಂಗಡಿ ಮಂಡಲ ಪ್ರಭಾರಿ ಕ್ಯಾ| ಬ್ರಿಜೇಶ್ ಚೌಟ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೋಪಾಲ ನಾಯ್ಕ ಮಾಚಾರು, ಜಿನ್ನಪ್ಪ ಮಲೆಕುಡಿಯ ನಾವೂರು, ಸರಸ್ವತಿ ಮಾಲಾಡಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಬಿಜೆಪಿ ಮಂಡಲ ಸಹ ಪ್ರಭಾರಿ ಭಾಗೀರಥಿ ಮುರುಳ್ಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶಾರದಾ ಆರ್.ರೈ, ತಾ.ಪಂ. ಉಪಾಧ್ಯಕ್ಷೆ ವೇದಾವತಿ, ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ಸೀತಾರಾಮ ಬಿ.ಎಸ್, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಸ್.ಟಿ. ಮೋರ್ಚಾ ಪ್ರಭಾರಿ ಲಿಂಗಪ್ಪ ನಾಕ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ಜಿ.ಪಂ. ಸದಸ್ಯೆ ಸೌಮ್ಯಲತಾ, ತಾ.ಪಂ. ಸದಸ್ಯೆ ಲೀಲಾವತಿ, ಎಸ್.ಟಿ. ಮೋರ್ಚಾ ಅಧ್ಯಕ್ಷ ಆನಂದ ನಾಯ್ಕ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ನಾಯ್ಕ, ನ.ಪಂ. ಸದಸ್ಯೆ ಲಲಿತಾ ಉಪಸ್ಥಿತರಿದ್ದರು.
ನಾರಾಯಣ ಆಚಾರ್ ಗೀತೆ ಹಾಡಿದರು. ಅಪ್ಪು ನಾಯ್ಕ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಜಿಲ್ಲಾ ಕಾರ್ಯದರ್ಶಿ ಹಾಗೂ ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಭಾರಿ ಕೊರಗಪ್ಪ ನಾಯ್ಕ ಸ್ವಾಗತಿಸಿದರು. ರಾಜೇಶ್ ಪೆರ್ಮುಡ ಸನ್ಮಾನಿತರ ಪಟ್ಟಿ ವಾಚಿಸಿದರು. ತಾ.ಪಂ.ಸ. ವಿಜಯ ಗೌಡ ಕಾರ್ಯಕ್ರಮ ನಿರೂಪಿಸಿ, ಲಿಂಗಪ್ಪ ನಾಕ ವಂದಿಸಿದರು.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

October 2017
M T W T F S S
« Sep    
 1
2345678
9101112131415
16171819202122
23242526272829
3031  

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top