Wed 13 Dec 2017, 12:30PM

ಹೆಚ್ಚಿನ ಸುದ್ದಿಗಳು

ನ.ಪಂ ರೂ. 1.50 ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

Thursday, October 12th, 2017 | Suddi Belthangady | no responses

Nagara panchayath vanijya sankeerna shilanyasaಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತ್ ವತಿಯಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರೂ. 1.50 ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣಕ್ಕೆ ಅ.11ರಂದು ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷ ಕೆ. ವಸಂತ ಬಂಗೇರ ಶಿಲಾನ್ಯಾಸ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು ಬೆಳ್ತಂಗಡಿ ಸಂತೆಕಟ್ಟೆಯ ವ್ಯಾಪಾರಸ್ಥರ ಅನುಕೂಲಕ್ಕಾಗಿ ಈ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಅಧ್ಯಕ್ಷತೆಯನ್ನು ನ.ಪಂ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ವಹಿಸಿದ್ದರು.
ಉಪಾಧ್ಯಕ್ಷ ಜಗದೀಶ್ ಡಿ., ನ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್, ನ.ಪಂ ಸದಸ್ಯರು, ಮುಖ್ಯಾಧಿಕಾರಿ ಜೆಸಿಂತಾ ಲೂಯಿಸ್, ಇಂಜಿನಿಯರ್ ಮಹಾವೀರ ಹಾಗೂ ನಾಗರಿಕರು ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top