Wed 13 Dec 2017, 4:07PM

ಹೆಚ್ಚಿನ ಸುದ್ದಿಗಳು

ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಆಚರಣೆ ಉದ್ಘಾಟನೆ ರಾಮಾಯಣ ಕಾವ್ಯದ ರಚನೆಕಾರ ವಾಲ್ಮೀಕಿಯ ಬಗ್ಗೆ ತಿಳಿದು ಮಾತನಾಡುವವರ ಸಂಖ್ಯೆ ವಿರಳ : ಶಾಹುಲ್ ಹಮೀದ್

Thursday, October 12th, 2017 | Suddi Belthangady | no responses

Valmiki jayanthiಬೆಳ್ತಂಗಡಿ : ರಾಮ, ಸೀತೆ, ಲಕ್ಷ್ಮಣ ಇವರು ರಾಮಾಯಣ ಮಹಾಕಾವ್ಯದ ಪ್ರಮುಖ ವ್ಯಕ್ತಿಗಳಾಗಿದ್ದು ಅವರ ಬಗ್ಗೆ ಮಾತನಾಡುವ ಅನೇಕರನ್ನು ನಾವು ಇಂದು ಸಮಾಜದಲ್ಲಿ ಕಾಣಬಹುದಾಗಿದೆ. ಆದರೆ ಅಂತಹಾ ಮಹಾ ಕಾವ್ಯವನ್ನು ರಚಿಸಿದ, ಮಹಾ ತಪಸ್ವಿ, ಮೇಧಾವಿ ವಾಲ್ಮೀಕಿ ಮಹರ್ಷಿಗಳ ಬಗ್ಗೆ ಅರಿತು ಮಾತನಾಡುವವರು ಬಹಳ ವಿರಳ ಎಂದು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪಟ್ಟಣ ಪಂಚಾಯತ್ ಬೆಳ್ತಂಗಡಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ತಾ.ಪಂ. ಸಭಾಂಗಣದಲ್ಲಿ ಅ. 5 ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪಂಚದ ಸಾಹಿತ್ಯಕ್ಕೆ ರಾಮಾಯಣ ಮಹಾಕಾವ್ಯ ಅತ್ಯಪೂರ್ವ ಕೊಡುಗೆ: ಕುಳಮರ್ವ
ಪ್ರಧಾನ ಉಪನ್ಯಾಸ ನೀಡಿದ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಗಣಪತಿ ಭಟ್ ಕುಳಮರ್ವ ಮಾತನಾಡಿ, ಪ್ರಪಂಚದ ಸಾಹಿತ್ಯಕ್ಕೆ ಶ್ರೀ ರಾಮಾಯಣ ಮಹಾ ಕಾವ್ಯ ಮೊತ್ತಮೊದಲ ಅಪೂರ್ವ ಕೊಡುಗೆ, ಇಲ್ಲಿ ಜಾತಿ ಮುಖ್ಯವಲ್ಲ, ಸಾಧನೆ ಮಾತ್ರಪರಿಗಣನೀಯ. ರಾಮಾಯಣ ಮಹಾಕಾವ್ಯವು ಹಲವಾರು ಟೀಕೆ, ಹೊಗಳಿಕೆ, ತೆಗಳಿಕೆಯನ್ನು ಮೆಟ್ಟಿನಿಂತ ಕಾವ್ಯವೂ ಕೂಡ ಹೌದು. ಅಂತಹಾ ಮೇಧಾವಿ ಕವಿ ಮಹಿರ್ಷಿ ವಾಲ್ಮೀಕಿಯವರು ಎಂದು ಬಣ್ಣಿಸಿದರು. ಅಧ್ಯಕ್ಷತೆಯನ್ನು ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್ ವಹಿಸಿದ್ದರು. ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಜಿ.ಪಂ. ಸದಸ್ಯ ಶೇಖರ್ ಕುಕ್ಕೇಡಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಜೆಸಿಂತಾ ಲೂಯಿಸ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಸವರಾಜ್ ಕೆ. ಅಯ್ಯಣ್ಣನವರ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶಿಲ್ದಾರ್ ಮುಹಮ್ಮದ್ ಇಸಾಕ್, ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top