Mon 18 Dec 2017, 1:54PM

ಹೆಚ್ಚಿನ ಸುದ್ದಿಗಳು

ಶಿಕ್ಷಕಿ ಶ್ರೀಮತಿ ಸೌಮ್ಯ ಕೆ. ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Friday, November 3rd, 2017 | Suddi Belthangady | no responses

indabettu sowmya K prasastiಬೆಳ್ತಂಗಡಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದೊಡ್ಡಬೆಲೆಯ ಸರಕಾರಿ ಪ್ರೌಢಶಾಲೆಯಲ್ಲಿ ಸಮಾಜ-ವಿಜ್ಞಾನ ಶಿಕ್ಷಕಿಯಾಗಿರುವ ಸೌಮ್ಯ ಕೆ. ಇವರು 2016-17ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ಸೆ. 5ರಂದು ನಡೆದ ಶಿಕ್ಷಕರ ದಿನಾಚರಣೆ ಯಂದು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕನ್ನಡ, ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಉತ್ತಮ ಕ್ರೀಡಾಪಟು ಕೂಡ ಆಗಿರುತ್ತಾರೆ. ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಚಿನ್ನದ ಪದಕ ಪಡೆದಿರುತ್ತಾರೆ. ಇವರು ಇಂದಬೆಟ್ಟು ಗ್ರಾಮದ ಇರ್ತಿಲಾಲ್ ಹಾಗೂ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ ಮತ್ತು ಶ್ರೀಮತಿ ಪಾರ್ವತಿ ಲಕ್ಷ್ಮಣ ಗೌಡ ದಂಪತಿ ಪುತ್ರಿಯಾಗಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top