Tue 21 Nov 2017, 11:17AM

ಹೆಚ್ಚಿನ ಸುದ್ದಿಗಳು

ಉಜಿರೆಯಲ್ಲಿ ನೂರನೇ ವಿಶೇಷ ಮದ್ಯವರ್ಜನ ಶಿಬಿರ : ನವ ಜೀವನೋತ್ಸವ ಕಾರ್ಯಾಗಾರ

Monday, November 13th, 2017 | Suddi Belthangady | no responses

shibiraಉಜಿರೆ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ. ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದ ಜಾಗೃತಿ ಸೌಧದಲ್ಲಿ ನೂರನೇ ವಿಶೇಷ ಮದ್ಯವರ್ಜನ ಶಿಬಿರದ ಪ್ರಯುಕ್ತ ನ. 12 ರಂದು ಆಯೋಜಿಸಲಾದ ನವ ಜೀವನೋತ್ಸವ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಎಚ್.ಸಿ. ರುದ್ರಪ್ಪ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜನ ಜಾಗೃತಿ ವೇದಿಕೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದ ಅವರು ವೇದಿಕೆಯ ಕಾರ್ಯಕ್ರಮಗಳಿಗೆ ವರ್ಷಕ್ಕೆ 15 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ. ರಾಮಕೃಷ್ಣ ರಾವ್, ಜಿಲ್ಲಾ ಮನೋ ವೈದ್ಯಾಧಿಕಾರಿ ಡಾ. ರತ್ನಾಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಮತ್ತು ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್‌ನ ಕಾರ್ಯದರ್ಶಿ ಶಿಶುಪಾಲ ಪೂವಣಿ ಉಪಸ್ಥಿತರಿದ್ದರು.
ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ವಿ. ಪಾಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಧನ್ಯವಾದವಿತ್ತರು. ಮನೋಹರ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

November 2017
M T W T F S S
« Oct    
 12345
6789101112
13141516171819
20212223242526
27282930  

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top