Mon 18 Dec 2017, 9:55PM

ಹೆಚ್ಚಿನ ಸುದ್ದಿಗಳು

ಸುಳ್ಯ :  ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಕಾರ್ಯಾಗಾರ

Friday, November 17th, 2017 | Suddi Belthangady | no responses

pathrika dinacharaneಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇದರ ವತಿಯಿಂದ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೆವಿಜಿ ಕಾನೂನು ಕಾಲೇಜು ಸುಳ್ಯ ಮತ್ತು ಸುದ್ದಿ ಬಿಡುಗಡೆ ಪತ್ರಿಕಾ ಸಮೂಹ ಇವರ ಸಹಭಾಗಿತ್ವದಲ್ಲಿ ನ. 16 ರಂದು ಕೆ.ವಿ.ಜಿ ಕಾನೂನು ಕಾಲೇಜು ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರಿಗೆ ವೃತ್ತಿ ಕಾರ್ಯಾಗಾರವನ್ನು ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಕೆ.ರವಿ ಪ್ರಧಾನ ಭಾಷಣಗೈದರು. ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ ಮುಖ್ಯ ಅತಿಥಿಯಾಗಿದ್ದರು. ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಶಂಕರಪ್ಪ, ಅಕಾಡೆಮಿ ಸದಸ್ಯರುಗಳಾದ ರವಿ, ವೆಂಕಟೇಶ್, ಕೆ.ವಿ.ಜಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಉದಯಕೃಷ್ಣ, ಕಾರ್ಯಾಗಾರ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಯು.ಪಿ.ಶಿವಾನಂದ, ಸಂಚಾಲಕ ಕೆ.ಎಂ.ಮುಸ್ತಫಾ, ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಹರೀಶ್ ರೈ ಪಿ.ಬಿ., ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top