Wed 13 Dec 2017, 9:40AM

ಹೆಚ್ಚಿನ ಸುದ್ದಿಗಳು

ಜಿಲ್ಲಾ ಮಟ್ಟದ ಕೃಷಿ ಉತ್ಸವ – 2017

Saturday, December 2nd, 2017 | Suddi Belthangady | no responses

Krushi mela

Krushi mela1

krushi mela2

krushi mela3

krushi mela4

krushi mela5

krushi mela6

krushi mela7

krushi mela8

krushi mela9ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಮಗಳೂರು ಮತ್ತು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಕೊಪ್ಪ ಇದರ ವತಿಯಿಂದ ಜಿಲ್ಲಾ ಮಟ್ಟದ ಕೃಷಿ ಉತ್ಸವವು ಡಿ. 1 ರಂದು ಕೊಪ್ಪ ಸರ್ಕಾರಿ ಪ್ರಥಮದರ್ಜೆ ಕಾಲೇಜು ಕ್ರೀಡಾಂಗಣ ಬಾಳಗಡಿಯಲ್ಲಿ ವರ್ಣರಂಜಿತ ರೈತ ಶೋಭಾಯಾತ್ರೆಯೊಂದಿಗೆ ನಡೆಯಿತು.
ಉದ್ಘಾಟನೆಯನ್ನು ಹರಿಹರಪುರ ಶ್ರೀ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಯವರು ನೆರವೇರಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್. ಜೀವರಾಜ್, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಟಿ.ಹೆಚ್. ಗೌಡ, ಧರ್ಮಸ್ಥಳ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್ ಮಂಜುನಾಥ್, ಚಿಕ್ಕಮಗಳೂರು ಜಿ.ಪಂ. ಉಪಾಧ್ಯಕ್ಷ ಎಸ್.ಎನ್ ರಾಮಸ್ವಾಮಿ ಶೆಟ್ಟಿಗದ್ದೆ, ಅಧ್ಯಕ್ಷ ಟಿ.ಡಿ ರಾಜೇಗೌಡ, ಕೊಪ್ಪ ತಾ.ಪಂ ಅಧ್ಯಕ್ಷ ಎನ್.ಕೆ ಉದಯ್, ಕೊಪ್ಪ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಾಣಿ ಸತೀಶ್ ಹೆಗ್ಡೆ, ಮಂಗಳೂರು ಐ.ಡಿ.ಬಿ.ಐ ಬ್ಯಾಂಕ್‌ನ ಉಪ ಮಹಾ ಪ್ರಬಂಧಕ ಶ್ರೀನಿವಾಸ ಎನ್., ಹರಂದೂರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರಮ್ಯಾ ಕೆ.ಎಸ್., ಶ್ರೀ.ಕ್ಷೇ.ಧ.ಗ್ರಾ.ಯೋ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ನಿರ್ದೇಶಕಿ ಶ್ರೀಮತಿ ಗೀತಾ, ಯೋಜನಾಧಿಕಾರಿ ದಿನೇಶ್ ಡಿ., ಕೊಪ್ಪ ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಕಾರ್ಯಾಧ್ಯಕ್ಷ ಎಲ್.ಎಂ ಪ್ರಕಾಶ್ ಕೌರಿ ಮೊದಲಾದವರು ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top