Mon 18 Dec 2017, 9:47PM

ಹೆಚ್ಚಿನ ಸುದ್ದಿಗಳು

ಎಸ್.ಡಿ.ಎಂ ಮಂಗಳಜ್ಯೋತಿ ಸಂಸ್ಥೆಗೆ ಅತ್ಯುತ್ತಮ ಸಂಸ್ಥೆ ರಾಷ್ಟ್ರ ಪ್ರಶಸ್ತಿ

Thursday, December 7th, 2017 | Suddi Belthangady | no responses

sdm mangalajyothi shalege prasastiಧರ್ಮಸ್ಥಳ : ಅಂಗವಿಕಲರ ಕಲ್ಯಾಣ ಸಂಸ್ಥೆ ಎಸ್.ಡಿ.ಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ವಿಕಲ ಚೇತನರ ಅಭ್ಯುದಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ವಿಕಲಚೇತನರ ಸಬಲೀಕರಣ ಇಲಾಖೆಯು ಕೊಡಮಾಡುವ ಸಮನ್ವಯ ಶಿಕ್ಷಣದ ಮೂಲಕ ವಿಲಕಚೇತನರ ಸಬಲೀಕರಣಕ್ಕೆ ಶ್ರಮಿಸಿದ ಅತ್ಯುತ್ತಮ ಸಂಸ್ಥೆ ಎನ್ನುವ ರಾಷ್ಟ್ರ ಪ್ರಶಸ್ತಿಯನ್ನು ಡಿ.3 ರಂದು ದೆಹಲಿಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯು ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರ ಮುಖೇನ ಕೊಡಮಾಡಲಾಯಿತು.
ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ. ಎ ರಾಜೇಂದ್ರ ಶೆಟ್ಟಿಯವರು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯದ ಸಚಿವರಾದ ತಾವರ್ ಚಂದ್ ಗಹ್ಲೋಟ್ ಹಾಗೂ ಇತರ ಕೇಂದ್ರ ಸರಕಾರದ ರಾಜ್ಯ ಸಚಿವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply


ಇಂದಿನ ಕಾರ್ಯಕ್ರಮ

ಶಿಕ್ಷಣ ಮಾರ್ಗದರ್ಶಿ

ಹಿಂದಿನ ಸುದ್ದಿಗಳು

December 2017
M T W T F S S
« Nov    
 123
45678910
11121314151617
18192021222324
25262728293031

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  22
.. ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2017 Suddinews.com . All Rights Reserved.
^ Back to Top