Sat 13 Jan 2018, 8:18PM

468X60

ಜಿಲ್ಲಾ ಉಸ್ತುವಾರಿ ಸಚಿವರಿಂದ ಈಜುಕೊಳ ಉದ್ಘಾಟನೆ

Friday, August 15th, 2014 | coorgeditor | no responses

up

ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದ ಬಳಿ ೨೦೭ ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈಜುಕೊಳವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಉದ್ಘಾಟಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಟೇಪ್ ಕತ್ತರಿಸುವ ಮೂಲಕ ಈಜುಕೊಳ ಕ್ರೀಡಾಂಗಣಕ್ಕೆ ಸಚಿವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವನಾಗಿದ್ದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಈಜುಕೊಳ ಮತ್ತು ಜಿಮ್ ಒಳಾಂಗಣ ಕ್ರೀಡಾಂಗಣ ಹಾಗೂ ಪೊನ್ನಂಪೇಟೆ ಮತ್ತು ಸೋಮವಾರಪೇಟೆಯಲ್ಲಿ ಹಾಕಿಟರ್ಫ್ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು ನೀಡಲಾಯಿತು. ಒಟ್ಟಾರೆ ೧೩ ಕೋಟಿ ರೂ ಅನುದಾನವನ್ನು ಕಡಿಮೆ ಅವಧಿಯಲ್ಲಿ ಜಿಲ್ಲೆಯ ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗೆ ತರಲು ಶ್ರಮಿಸಲಾಯಿತು ಎಂದು ಅಪ್ಪಚ್ಚುರಂಜನ್ ಅವರು ತಿಳಿಸಿದರು.
ನೂತನ ಯುವ ನೀತಿ ಮತ್ತು ಕ್ರೀಡಾ ನೀತಿಯನ್ನು ಜಾರಿಗೊಳಿಸಿ ಯುವಜನರ ಕ್ರೀಡಾಸ್ಪೂರ್ತಿಗೆ ಇನ್ನಷ್ಟು ಒತ್ತು ನೀಡಬೇಕಿದೆ. ಜಿಲ್ಲೆಯ ಯುವಜನರು ಕ್ರೀಡಾ ಸೌಲಭ್ಯಗಳನ್ನು ಪಡೆದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುವಂತಾಗಲಿ ಎಂದು ಶಾಸಕರು ಆಶಿಸಿದರು.
ಜಿ.ಪಂ.ಅಧ್ಯಕ್ಷರಾದ ಶರೀನ್ ಸುಬ್ಬಯ್ಯ, ಉಪಾಧ್ಯಕ್ಷರಾದ ಬೀನಾ ಬೊಳ್ಳಮ್ಮ, ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಉಪ ವಿಭಾಗಾಧಿಕಾರಿ ಅಭಿರಾಮ್ ಜಿ.ಶಂಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಕೆ.ಎಂ.ರವಿಕುಮಾರ್, ರಾಘವೇಂದ್ರ ಗೀತಾಂಜಲಿ, ಸಚಿನ್, ಪ್ರೀತಿ ಮತ್ತಿತರರು ಇದ್ದರು.

 

 

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top