Thu 18 Jan 2018, 5:21PM

468X60

ನ.2ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭ: ಕೆ.ವಿ.ಸುರೇಶ್

Friday, September 5th, 2014 | coorgeditor | no responses

anu

ಮಡಿಕೇರಿ : ಜಿಲ್ಲೆಯ ಎಲ್ಲಾ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ನವೆಂಬರ್, ೦೨ ರಿಂದ ಆರಂಭವಾಗಲಿದ್ದು, ಈ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಸುರೇಶ್ ಅವರು ತಿಳಿಸಿದ್ದಾರೆ.

ನಗರದ ಡಿ.ದೇವರಾಜ ಅರಸುಭವನದಲ್ಲಿಂದು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಹಿಂದುಳಿದ ವರ್ಗ ಆಯೋಗದಿಂದ ಕೈಗೊಳ್ಳಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಪೂರ್ವ ಸಿದ್ದತೆ ಹಾಗೂ ಸಮೀಕ್ಷಾ ಪ್ರಕ್ರಿಯೆಗಳನ್ನು ಆರಂಭಿಸಬೇಕಿದ್ದು, ಈ ಹಿನ್ನೆಲೆ ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಜೋಡಿಸಬೇಕಿದೆ ಎಂದು ಅವರು ಕೋರಿದರು.
ಗ್ರಾಮಾಂತರ ಪ್ರದೇಶದಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರರು ಚಾರ್ಜ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಾಗೆಯೇ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಪೌರಾಯುಕ್ತರು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಚಾರ್ಜ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ತಮ್ಮ ವ್ಯಾಪ್ತಿಗೆ ಬರುವ ನಕ್ಷೆ ಹಾಗೂ ಸಂಕ್ಷಿಪ್ತ ಮನೆಪಟ್ಟಿಯನ್ನು ಪಡೆದು ಸಮೀಕ್ಷೆಯನ್ನು ಕೈಗೊಳ್ಳಬೇಕಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದರು.
ಚಾರ್ಜ್ ಅಧಿಕಾರಿಗಳು ಸಮೀಕ್ಷೆಗೆ ಬೇಕಿರುವ ಪರಿಕರ-ಸಾಮಾಗ್ರಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆಯುವುದು. ಅವುಗಳನ್ನು ಗಣತಿದಾರರಿಗೆ ವಿತರಿಸುವುದು. ಮೇಲ್ವಿಚಾರಕರನ್ನು ಗುರುತಿಸಿ ನೇಮಿಸುವುದು. ಮಾಸ್ಟರ್ ಟ್ರೈನರ್‍ಸ್‌ನ್ನು ನೇಮಿಸಿ ಮೇಲ್ವಿಚಾರಕರು ಮತ್ತು ಗಣತಿದಾರರಿಗೆ ತರಬೇತಿ ನೀಡುವಂತಾಗಬೇಕು ಎಂದು ಕೆ.ವಿ.ಸುರೇಶ್ ಅವರು ತಿಳಿಸಿದರು.
ಸಮೀಕ್ಷೆಗಾಗಿ ನೇಮಕವಾಗುವ ಮೇಲ್ವಿಚಾರಕರು ಹಾಗೂ ಸಮೀಕ್ಷಾ ಗಣತಿದಾರರಿಗೆ ತರಬೇತಿ ನೀಡುವುದು. ಸಮೀಕ್ಷೆಯನ್ನು ನಿರ್ವಹಿಸುವ ಗಣತಿದಾರರ ಕಾರ್ಯವನ್ನು ಸಮೀಕ್ಷಾ ಪ್ರಾರಂಭದಿಂದ ಹಿಡಿದು ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವುದು ಮೇಲ್ವಿಚಾರಕರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಪಡೆದಿರುವ ಉದ್ಯೋಗಾಕಾಂಕ್ಷಿಗಳನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಆಸಕ್ತ ಯುವಕರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕೆ.ವಿ.ಸುರೇಶ್ ಅವರು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರನ್ನು ಗಣತಿಕಾರ್ಯಕ್ಕೆ ನಿಯೋಜಿಸಲು ಶಿಕ್ಷಣ ಹಕ್ಕು ಕಾಯ್ದೆಯಡಿ ನಿಷೇಧವಿದೆ. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಕೂಡ ಈ ಕಾರ್ಯಕ್ರಮಕ್ಕೆ ತೊಡಗಿಸಿಕೊಳ್ಳಲು ಅವಕಾಶವಿಲ್ಲ. ಉಳಿದಂತೆ ನಾನಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದು ಕೆ.ವಿ.ಸುರೇಶ್ ಅವರು ಹೇಳಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪಾಂಡೆ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು ೧೧೬೮ ಬ್ಲಾಕ್‌ಗಳನ್ನು ರಚಿಸಲಾಗಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ೨೪೪, ಸೋಮವಾರಪೇಟೆ ತಾಲ್ಲೂಕಿನಲ್ಲಿ ೩೯೨, ವಿರಾಜಪೇಟೆ ತಾಲ್ಲೂಕಿನಲ್ಲಿ ೩೭೨ ಬ್ಲಾಕ್‌ಗಳು, ಹಾಗೆಯೇ ಮಡಿಕೇರಿ ನಗರದಲ್ಲಿ ೬೧, ವಿರಾಜಪೇಟೆ ಪಟ್ಟಣದಲ್ಲಿ ೩೬, ಕುಶಾಲನಗರದ ಪಟ್ಟಣದಲ್ಲಿ ೨೮, ಗೋಣಿಕೊಪ್ಪದಲ್ಲಿ ೧೭, ಸೋಮವಾರಪೇಟೆ ಪಟ್ಟಣದಲ್ಲಿ ೧೩ ಬ್ಲಾಕ್‌ಗಳನ್ನು ರಚಿಸಿ ೬ ಬ್ಲಾಕ್‌ಗಳಿಗೆ ಒಬ್ಬ ಮೇಲ್ವಿಚಾರಕರು ಹಾಗೂ ಒಂದು ಬ್ಲಾಕ್‌ಗೆ ತಲಾ ಒಬ್ಬ ಗಣತಿದಾರರನ್ನು ನಿಯೋಜಿಸಿ ಸಮೀಕ್ಷೆ ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಉದ್ಯೋಗವಿನಿಮಯಾಧಿಕಾರಿ ಸಿ.ಜಗನ್ನಾಥ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಹಲವು ಮಾಹಿತಿ ನೀಡಿದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಪುಟ್ಟರಾಜು, ಜಿ.ಪಂ.ಸದಸ್ಯ ಕಾರ್ಯದರ್ಶಿ ಮಧುಕುಮಾರ್, ತಹಶೀಲ್ದಾರರಾದ ಕುಂಞಮ್ಮ(ಮಡಿಕೇರಿ), ವೆಂಕಟೇಶ್(ಸೋಮವಾರಪೇಟೆ), ನಗರಸಭೆ ಎಂಜಿನಿಯರ್ ಶಬರಿನಾಥ ರೈ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ರಂಜನ್(ಸೋಮವಾರಪೇಟೆ), ರಮೇಶ್(ವಿರಾಜಪೇಟೆ), ಮತ್ತಿತರರು ಇದ್ದರು.
ಅರ್ಜಿ ಆಹ್ವಾನ:- ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಸಂಪನ್ಮೂಲ ವ್ಯಕ್ತಿಗಳ ಸೇವೆಯನ್ನು ತಾತ್ಕಾಲಿಕವಾಗಿ ಪಡೆಯಲು ನಿವೃತ್ತ ಅಧಿಕಾರಿ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ:- ರಾಜ್ಯ ನಿವಾಸಿಯಾಗಿರಬೇಕು. ೬೫ ವರ್ಷದೊಳಗಿರಬೇಕು. ಜನಗಣತಿ ಆರ್ಥಿಕ ಮತ್ತು ಸಾಂಖ್ಯಿಕ, ಕಂದಾಯ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಪೌರಾಡಳಿತ ಮತ್ತಿತರ ಇಲಾಖೆಯಲ್ಲಿ ‘ಬಿ’ ವೃಂದದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೧೬ ಕೊನೆಯ ದಿನವಾಗಿದ್ದು, ಅರ್ಜಿಯನ್ನು ಸದಸ್ಯ ಕಾರ್ಯದರ್ಶಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ೨ನೇ ಮಹಡಿ, ಡಿ.ದೇವರಾಜ ಅರಸು ಭವನ, ನಂ.೧೬, ಡಿ.ಮಿಲ್ಲರ್‍ಸ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು-೫೨ ಈ ವಿಳಾಸಕ್ಕೆ ನೇರವಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ನಿಗದಿತ ದಿನಾಂಕದ ನಂತರ ಆಯೋಗದ ಕಚೇರಿಯಲ್ಲಿ ಅಂಚೆ ಮೂಲಕ ಸ್ವೀಕೃತಗೊಂಡ ಅರ್ಜಿಗಳನ್ನು ಹಾಗೂ ಅಪೂರ್ಣವಾಗಿ ಭರ್ತಿ ಮಾಡಿದ ಅಥವಾ ನಿಗದಿತ ದಾಖಲೆ ಪ್ರಮಾಣ ಪತ್ರಗಳು ಇಲ್ಲದೆ ಸ್ವೀಕೃತವಾದಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ವಿವರಗಳನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವೆಬ್‌ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನಿಂದ ಪಡೆಯಬಹುದು. ಅಥವಾ ಆಯಾಯ ಜಿಲ್ಲೆಯಲ್ಲಿನ ಜಿಲ್ಲಾ ಹಿಂದುಳಿದ ವರ್ಗಗಳ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೫೬೨೮ ಮಾಹಿತಿ ಪಡೆಯಬಹುದಾಗಿದೆ.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top