Sun 14 Jan 2018, 4:47AM

468X60

ಇಂದಬೆಟ್ಟು: ಜ್ಞಾನವಿಕಾಸ ಸದಸ್ಯರಿಗೆ ಸೃಜನಶೀಲ ತರಬೇತಿ ಕಾರ್ಯಕ್ರಮ

Monday, September 8th, 2014 | suddiblt | no responses

1ಇಂದಬೆಟ್ಟು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಹಿಳೆಯರಿಗೆ ಪೌಷ್ಠಿಕತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸೃಜನಶೀಲ ಕಾರ್ಯಕ್ರಮವು ಜನಪರ ಕಾರ್ಯಕ್ರಮವಾಗಿದೆ ಎಂದು ಕಿಲ್ಲೂರಿನ ಹಿರಿಯ ವೈದ್ಯೆ ಡಾ. ವಾಣಿ ಸುಗುಣಕುಮಾರ್ ಹೇಳಿದರು.
ಅವರು ಸೆ. ೭ರಂದು ಇಂದಬೆಟ್ಟು ಸರಕಾರಿ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನ ವಿಕಾಸ ಕೇಂದ್ರ ಸದಸ್ಯೆಯರಿಗಾಗಿ ಸೃಜನಶೀಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ರೂಪಾ.ಜಿ. ಜೈನ್ ಅವರು ಪ್ರಸ್ತಾವಿಸಿ ಯೋಜನೆಯ ಹಾಗೂ ಜ್ಞಾನವಿಕಾಸದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಪತ್ರಕರ್ತ ಭುವನೇಶ್ ಗೇರುಕಟ್ಟೆ, ಇಂದಬೆಟ್ಟು ಹಾಗೂ ಬಂಗಾಡಿ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಗೌಡ, ದರ್ಣಪ್ಪ ಗೌಡ ಇದ್ದರು.
ಇದೇ ಸಂದರ್ಭ ಜ್ಞಾನ ವಿಕಾಸ ಕೇಂದ್ರದ ಸದಸ್ಯೆರಿಗೆ ರಕ್ತಹೀನತೆಯ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಯಿತು.
ಜ್ಞಾನವಿಕಾಸ ತಾಲೂಕು ಸಮನ್ವಯಾಧಿಕಾರಿ ರೇಣುಕಾ ಸ್ವಾಗತಿಸಿದರು. ಉಜಿರೆ ವಲಯ ಮೇಲ್ವಿಚಾರಕ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು. ಸೇವಾನಿರತೆ ಯಶೋಧ ವಂದಿಸಿದರು.

Leave a Reply


ಸುಭಾಷಿತ

ಒಳ್ಳೆಯವರು ನಿಷ್ಕ್ರಿಯರಾದಾಗ ತಪ್ಪುಗಳು ಕೆಡುಕುಗಳು ವಿಜೃಂಭಿಸುತ್ತದೆ.

-ವಿದುರ ನೀತಿ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top