Tue 16 Jan 2018, 5:49AM

468X60

ಸುಳ್ಯ ಎ.ಪಿ.ಎಂ.ಸಿಯಲ್ಲಿ ರೈತರ ಸಭೆ

Wednesday, September 10th, 2014 | suddisullia | no responses

ಪ್ರಾಣಿಗಳಿಂದ ಬೆಳೆ ರಕ್ಷಣೆ ಮಾಡುವ ಕುರಿತು ಚರ್ಚಿಸಲು ರೈತರ ಸಭೆಯು ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ರೈತ ಸಂಘ, ಹಸಿರು ಸೇನೆ ಜಿಲ್ಲಾ ಘಟಕ ಹಾಗೂ ಎಪಿಎಂಸಿ ಆಶ್ರಯದಲ್ಲಿ ಸಭೆ ಆಯೋಜಿಸಲಾಗಿತ್ತು.

ಎಪಿಎಂಸಿ ಅಧ್ಯಕ್ಷ ಸತೀಶ್ ಕೂಜುಗೋಡು ಕಾರ್ಯಕ್ರಮ ಉದ್ಘಾಟಿಸಿದರು. ಹಸಿರು ಸೇನೆ ಅಧ್ಯಕ್ಷ ರವಿಕಿರಣ್ ಪುಣಚ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲ್ಲೂಕು ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಎಂ.ಡಿ.ವಿಜಯಕುಮಾರ್ ಅತಿಥಿಯಾಗಿದ್ದರು. ಮಂಗಗಳ ಹಾವಳಿಯನ್ನು ನಿಯಂತ್ರಿಸಲು ಮಂಕಿಪಾರ್ಕ್ ನಿರ್ಮಾಣ ಅಥವ ವಿದೇಶಗಳಿಗೆ ರಫ್ತು ಮಾಡುವ ಯೋಜನೆ ರೂಪಿಸಬೇಕು ಎಂದರು.
ಮಂಗಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಬೇಕು ಎಂಬ ಸಲಹೆ ಬೀರಾ ಮೋಯಿದ್ದೀನ್ ಅವರಿಂದ ಬಂತು. ವನ್ಯಜೀವಿ ಕಾಯ್ದೆಯಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ೫ ವರ್ಷಗಳ ಕಾಲ ಹೊರಗಿಡಬೇಕು ಎಂದು ವರ್ತಕ ಸಂಘದ ಅಧ್ಯಕ್ಷ ವಿಶ್ವನಾಥ್ ರಾವ್ ಹೇಳಿದರು. ಭರತ್ ಮುಂಡೋಡಿ, ತಾರಾ ಮಲ್ಲಾರ, ಸದಾನಂದ ಮಾವಾಜಿ ಮೊದಲಾದವರಿದ್ದರು

.Raitha Karyagara

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top