Wed 17 Jan 2018, 11:56AM

468X60

ಕೆಎಸ್‌ಟಿಡಿಸಿ ಹೋಟೆಲ್ ವಿಶ್ವದರ್ಜೆಯ ಸೌಲಭ್ಯ: ಡಾ.ಪಿ.ಎಸ್.ಹರ್ಷ

Friday, September 12th, 2014 | coorgeditor | no responses

bus news

555 news

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಲ್ಲಿ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಿ ವಿಶ್ವದರ್ಜೆಯ ವಿಶ್ವಮಟ್ಟದ ಹೋಟೆಲ್‌ಗಳಂತೆ ಅಭಿವೃದ್ಧಿಪಡಿಸಲು ಕಟಿಬದ್ಧ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪಿ.ಎಸ್.ಹರ್ಷ ಅವರು ಪ್ರಕಟಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆ.ಎಸ್.ಟಿ.ಡಿ.ಸಿ) ಸಾರಿಗೆ ವಿಭಾಗದಿಂದ ಶುಕ್ರವಾರ ನಗರದ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಒಂದು ದಿನದ ವ್ಯವಸ್ಥಿತ ಪ್ರವಾಸ(ಒನ್ ಡೇ ಪ್ಯಾಕೆಜ್ ಟೂರ್)ಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳೊಂದಿಗೆ ಕೈಜೋಡಿಸಿ ಮತ್ತಷ್ಟು ಅಭಿವೃದ್ಧಿಪಡಿಸುವಲ್ಲಿ ಶ್ರಮಿಸಲಾಗುತ್ತಿದೆ. ರಾಜ್ಯದ ಕರಾವಳಿ, ಮಲೆನಾಡು, ಮತ್ತಿತರ ಭಾಗಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಿಗಮವು ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಆ ದಿಸೆಯಲ್ಲಿ ಹಂತ ಹಂತವಾಗಿ ಪ್ರವಾಸಿಗರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಯತ್ನಗಳು ನಡೆದಿವೆ ಎಂದು ಡಾ.ಪಿ.ಎಸ್.ಹರ್ಷ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರವಾಸಿಗರ ಅನುಕೂಲಕ್ಕೆ ಮನ್ನಣೆ ನೀಡಿದೆ. ಪ್ರವಾಸಿಗರ ರಕ್ಷಣೆ, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಮಧ್ಯಮ ದರದಲ್ಲಿ ಸೌಲಭ್ಯವನ್ನು ಒದಗಿಸಲು ಪ್ರಯತ್ನಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.
ಒಂದು ದಿನದ ಪ್ರವಾಸದಲ್ಲಿ ಹೆಚ್ಚಿನ ಪ್ರವಾಸಿ ಸ್ಥಳಗಳನ್ನು ವೀಕ್ಷಣೆ ಮಾಡಲು ಅವಕಾಶವಾಗಿದೆ. ಸ್ಥಳೀಯ ಸಮುದಾಯ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗಿದೆ. ಕೊಡಗಿನ ಸಂಸ್ಕೃತಿ, ಆಚಾರ ವಿಚಾರ, ಉಡುಗೆ ತೊಡುಗೆ ಊಟೋಪಚಾರ ಮತ್ತಿತರ ಬಗ್ಗೆ ಪ್ರವಾಸಿಗರಿಗೆ ಪರಿಚಯಿಸಲು ಶ್ರಮಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರವಾಸೋದ್ಯಮದಲ್ಲಿ ಕೊಡಗು ಜಿಲ್ಲೆ ದೇಶದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದ್ದು, ಈ ಪ್ರವಾಸಿ ಮಿನಿ ಬಸ್ ಸೇವೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ. ರಾಜ್ಯ, ದೇಶದ ಅಥವಾ ವಿದೇಶಿಯರು ಕೊಡಗಿನ ಪ್ರವಾಸಿ ಸ್ಥಳಗಳನ್ನು ವೀಕ್ಷಣೆ ಮಾಡಲು ಪ್ರವಾಸಿ ಮಿನಿ ಬಸ್ ಸೌಲಭ್ಯಕ್ಕಾಗಿ ಅಂತರ್ಜಾಲದ ಮೂಲಕ ಕಾಯ್ದಿರಿಸಬಹುದಾಗಿದೆ ಎಂದು ಅವರು ಹೇಳಿದರು.
ಮೊದಲ ದಿನವಾದ ಶುಕ್ರವಾರ ಹತ್ತು ಮಂದಿ ಪ್ರವಾಸಿಗರು ಪ್ರಯಾಣ ಬೆಳೆಸಿದರು. ಮಡಿಕೇರಿಯಿಂದ ಹೊರಟು ಭಾಗಮಂಡಲ, ತಲಕಾವೇರಿ, ಅಬ್ಬಿ ಫಾಲ್ಸ್, ರಾಜರ ಗದ್ದುಗೆ, ಓಂಕಾರೇಶ್ವರ ದೇವಸ್ಥಾನ ಮತ್ತು ರಾಜಾಸೀಟ್ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲಾಗುತ್ತದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಾರಿಗೆ ವಿಭಾಗದ ಜನರಲ್ ಮ್ಯಾನೇಜರ್ ಎಂ.ಪಿ.ಬೆಳ್ಯಪ್ಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಫಣೀಶ್, ಹೋಟೆಲ್ ಮಯೂರ ವ್ಯಾಲಿ ವ್ಯೂನ ವ್ಯವಸ್ಥಾಪಕರಾದ ರಮೇಶ್, ಪ್ರವಾಸೋದ್ಯಮ ಪ್ರವರ್ತಕರಾದ ಅನಿಲ್ ಹೆಚ್.ಟಿ., ಟ್ರಾವೆಲ್ ಕೂರ್ಗ್‌ನ ಮಾಲೀಕರಾದ ಸತ್ಯ, ಮತ್ತಿತರರು ಇದ್ದರು.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top