Sat 20 Jan 2018, 11:05AM

468X60

ತಾಲೂಕು ಮಟ್ಟದ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ 3 ಸಮಗ್ರ ಪ್ರಶಸ್ತಿ

Tuesday, November 11th, 2014 | suddiputtur | no responses

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಪುತ್ತೂರು ದ.ಕ ಮತ್ತು ಪಟ್ಟೆ ವಿದ್ಯಾಸಂಸ್ಥೆಗಳು ಪುತ್ತೂರು ದ.ಕ ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಶಾಲೆಯ ವಿದ್ಯಾರ್ಥಿಗಳು 17 ರ ವಯೋಮಾನದ ಬಾಲಕರು ಪ್ರಥಮ, 17ರ ವಯೋಮಾನದ ಬಾಲಕಿಯರು ಪ್ರಥಮ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರು ಪ್ರಥಮ ಸ್ಥಾನ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಯತೀಶ್, 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು.ಸೌಮ್ಯಶ್ರೀ ವೈಯಕ್ತಿಕ ಚಾಂಪಿಯನ್ ಪಡೆದಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ್ ಬೆಟ್ಟಂಪಾಡಿ, ಶ್ರೀಮತಿ ಹರಿಣಾಕ್ಷಿ ಮತ್ತು ಕೃಷ್ಣಪ್ರಸಾದ್ ಬೆಟ್ಟಂಪಾಡಿ ತರಬೇತಿ ನೀಡಿರುತ್ತಾರೆ.

DSC_2339

DSC_2346

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top