Sat 13 Jan 2018, 5:39PM

468X60

ಮಹಿಳಾ ಮಂಡಲಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Saturday, January 31st, 2015 | Suddi Belthangady | no responses

     Mahila manaviಉಜಿರೆ: ಬೆಳ್ತಂಗಡಿ ನಗರದ ಕ್ಯಾಂಪ್ಕೋ ರಸ್ತೆಯಲ್ಲಿರುವ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಕಟ್ಟಡದ ಹಿಂಭಾಗದಲ್ಲಿ ಧರೆ ಕುಸಿದು ಬೀಳದಂತೆ ಸುರಕ್ಷಿತ ತಡೆಗೋಡೆ ನಿರ್ಮಾಣ ಮಾಡುವರೇ ಬೇಡಿಕೆಯಿ ಟ್ಟು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಎ. ಬಿ ಇಬ್ರಾಹಿಂ ಅವರಿಗೆ ಮನವಿ ಸಲ್ಲಿಸಿ ಹಿಂದೆ ನೀಡಿದ್ದ ಬೇಡಿಕೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆಯಲಾಯಿತು.
ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ, ಕಡಿರುದ್ಯಾವರ ವಿದ್ಯಾಸರಸ್ವತಿ ಮಹಿಳಾ ಮಂಡಲದ ಅಧ್ಯಕ್ಷೆಯೂ ಆಗಿರುವ ಲೋಕೇಶ್ವರೀ ವಿನಯಚಂದ್ರ ಅವರ ನೇತೃತ್ವದ ನಿಯೋಗ ಡಿಸಿ ಅವರನ್ನು ಉಜಿರೆಯಲ್ಲಿ ಭೇಟಿಮಾಡಿ ಚರ್ಚಿಸಿದರು. ಈ ವೇಳೆ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಾಂತಾ ಬಂಗೇರ ಕುವೆಟ್ಟು, ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕರ್ತೆಯರಾದ ಸೌಮ್ಯಾ ಮತ್ತು ಕವಿತಾ, ಮಹಿಳಾ ಮಂಡಲಗಳ ಒಕ್ಕೂಟದ ಸದಸ್ಯೆ ಪಲ್ಲವಿ ರಾಜು ಉಪಸ್ಥಿತರಿದ್ದರು.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top