Tue 16 Jan 2018, 6:08PM

468X60

ಸಿ.ಎನ್.ಸಿ ಕೊಡವ ನ್ಯಾಷನಲ್ ಕೌನ್ಸಿಲ್-ಮನವಿ

Wednesday, March 18th, 2015 | webnews | no responses

Photo

ಕೊಡಗಿನ ಕಾಫಿ ಉದ್ಯಮದ ಮೇಲೆ ಮಲಬಾರಿ ಬೀಡಾಡಿ ವ್ಯಾಪಾರಿಗಳ ಮುಖಾಂತರ ೧.ಹವಾಲ ಹಣ Black Money– ೨.ಖೋಟಾ ನೋಟು (fake currency) ಮೂಲಕ ಆ ಕಂಪೆನಿ ಕರಿ ನೆರಳು. ಈ ಬೀಡಾಡಿ ವ್ಯಾಪಾರಿಗಳು ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ಹಣ ಸಂದಾಯ ಮಾಡುವ ವ್ಯವಸ್ಥೆ ಆಗಬೇಕು ಯಾವುದೇ ಕಾರಣಕ್ಕೂ ಕ್ಯಾಶ್ ತೆಗೆದುಕೊಳ್ಳಬಾರದು ಬರೇ ಚೆಕ್‌ನ್ನು R.T.G.S(Real Time Gross Settlement,)) ಮೂಲಕ ಹಾಗು ಡಿ.ಡಿ ಮೂಲಕ transaction ಗೆ ಸರ್ಕಾರ ಮುಂದಡಿ ಇಡಬೇಕು. – ಕೇಂದ್ರ ಗೃಹ ಮಂತ್ರಿಗಳು, ಕೇಂದ್ರ ಹಣಕಾಸು ಮಂತ್ರಿಗಳು, ಭಾರತದ ರಿಸರ್ವ್ ಬ್ಯಾಂಕ್‌ನ ಗವರ್ನರ್, ಕರ್ನಾಟಕದ ರಾಜ್ಯಪಾಲರು ಮತ್ತು ಕೊಡಗು ಮೈಸೂರು ಸಂಸದ ಶ್ರೀ ಪ್ರತಾಪ್ ಸಿಂಹರವರಿಗೆ ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಜ್ಪಾಪನಾ ಪತ್ರ ಸಲ್ಲಿಸಲಾಯಿತು.

ಮಡಿಕೇರಿ ಮಾ.೧೭(ಕರ್ನಾಟಕ ವಾರ್ತೆ):-ಅರಣ್ಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಹಾಗೂ ಅರಣ್ಯ ಪ್ರದೇಶದಲ್ಲಿನ ಸಮಸ್ಯೆ ಸಂಬಂಧ ಚರ್ಚಿಸಲು ಜಿಲ್ಲೆಯ ಎಲ್ಲಾ ಹಂತದ ಅರಣ್ಯ ಇಲಾಖೆ ಅಧಿಕಾರಿಗಳ ಸಭೆಯನ್ನು ಮಾರ್ಚ್, ೨೪ರಂದು ನಿಗಧಿಪಡಿಸಿರುವುದರಿಂದ ಅಂದು(ಮಾ.೨೪) ಮಧ್ಯಾಹ್ನ ನಂತರ ಜಿಲ್ಲಾ ಪಂಚಾಯಿತಿ ಮುಂದುವರಿದ ಸಾಮಾನ್ಯ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸೋಮವಾರ ಜಿ.ಪಂ.ಅಧ್ಯಕ್ಷರಾದ ಚೋಡುಮಾಡ ಶರೀನ್ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ.ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಅನುಪಾಲನಾ ವರದಿ ಮಾತ್ರ ಚರ್ಚೆಯಾಗಿದೆ. ಉಳಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಲು ತಕ್ಷಣವೇ ಸಭೆ ಆಹ್ವಾನಿಸಬೇಕೆಂದು ಬಾಂಡ್ ಗಣಪತಿ ಅವರು ಜಿ.ಪಂ.ಅಧ್ಯಕ್ಷರಲ್ಲಿ ಕೋರಿದರು, ಇದಕ್ಕೆ ಜಿ.ಪಂ.ಅಧ್ಯಕ್ಷರು ಮಾರ್ಚ್ ೨೪ರಂದು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿ.ಪಂ.ಮುಂದುವರಿದ ಸಾಮಾನ್ಯ ಸಭೆಯನ್ನು ನಡೆಸಲಾಗುವುದು ಎಂದು ಪ್ರಕಟಿಸಿದರು.
ಜಿಲ್ಲೆಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನದಲ್ಲಿ ಲೋಪವಾಗಿರುವುದು ಕಂಡು ಬಂದಿದ್ದು, ಈ ಸಂಬಂಧ ವರದಿ ನೀಡಲಾಗಿದ್ದು, ಇದನ್ನು ಲೋಕಾಯುಕ್ತಕ್ಕೆ ಸಲ್ಲಿಸಲು ಜಿ.ಪಂ.ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.
ಈ ವಿಷಯ ಕುರಿತು ಮಾತನಾಡಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಬಿ.ಭಾರತೀಶ್ ಅವರು ೨೦೦೬ ರಿಂದ ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನದಲ್ಲಿ ಲೋಪವಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಸಂಬಂಧ ಸೂಕ್ತ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಶಾಲಾ ಕಟ್ಟಡ ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿಗಳು ಕಳಪೆಯಿಂದ ಕೂಡಿದೆ. ಕೂಡಲೇ ಸರ್ಕಾರಕ್ಕೆ ಪತ್ರ ಬರೆಯುವಂತಾಗಬೇಕು ಎಂದು ಜಿ.ಪಂ.ಉಪಾಧ್ಯಕ್ಷರಾದ ಅಲ್ಲಾರಂಡ ಬೀನಾ ಬೊಳ್ಳಮ್ಮ ಅವರು ಸಲಹೆ ಮಾಡಿದರು.
ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಟಿ.ಪಿ.ಸಂದೇಶ್ ಅವರು ಮಾತನಾಡಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಜಿಲ್ಲೆಯ ಯಾವ ಯಾವ ಸ್ಥಳಗಳಲ್ಲಿ ಕಾಮಗಾರಿ ನಡೆಯುತ್ತಿವೆ. ಪ್ರಗತಿ ಯಾವ ಹಂತದಲ್ಲಿದೆ ಎಂಬ ಮಾಹಿತಿ ಒದಗಿಸಬೇಕು ಎಂದರು.
ಇದಕ್ಕೆ ಸಂಬಂಧಿಸಿದ ಅಧಿಕಾರಿ ಮಾಹಿತಿ ನೀಡಿ ೧೩ ಕಡೆ ಕೆಲಸ ಪ್ರಾರಂಭವಾಗಿದೆ. ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಎಂದು ಅವರು ಮಾಹಿತಿ ನೀಡಿದರು.
ಸದಸ್ಯರಾದ ಎಸ್.ಎನ್.ರಾಜಾರಾವ್ ಅವರು ಮಾತನಾಡಿ ಜೇನು ಕೃಷಿ ಉತ್ತೇಜನಕ್ಕೆ ಜೇನುಕೃಷಿಕರಿಗೆ ಹೆಚ್ಚಿನ ಆರ್ಥಿಕ ಸಹಾಯಧನ ಒದಗಿಸುವಂತಾಗಬೇಕು. ಜತೆಗೆ ೨೦೦ ರೂ. ಬೆಂಬಲ ಬೆಲೆ ನೀಡುವಂತಾಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸಲಹೆ ಮಾಡಿದರು.
ಸದಸ್ಯರಾದ ಬಿದ್ದಂಡ ಉಷಾ ದೇವಮ್ಮ ಅವರು ಜಿಲ್ಲೆಯ ಅಂಗನವಾಡಿಗಳಿಗೆ ಸಮರ್ಪಕವಾಗಿ ಆಹಾರ ಪದಾರ್ಥ ಪೂರೈಕೆ ಮಾಡಬೇಕು. ಅಂಗನವಾಡಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಎಲ್ಲಾ ರೀತಿಯ ಕ್ರಮವಹಿಸಬೇಕು ಎಂದು ಅವರು ಸಲಹೆ ಮಾಡಿದರು.
ಇದಕ್ಕೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ರಮೇಶ್ ಹಾಲಬಾವಿ ಅವರು ಎಂಎಸ್‌ಪಿಟಿಎಸ್ ಮೂಲಕ ಅಂಗನವಾಡಿಗಳಿಗೆ ಆಹಾರ ಧಾನ್ಯ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ ಎಂದು ಅವರು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಪ್ರತಿನಿತ್ಯ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗಿದೆ. ಈ ಸಂಬಂಧ ಸಂಬಂಧಿಸಿದವರು ಗಮನಹರಿಸಬೇಕಿದೆ ಎಂದು ಉಷಾದೇವಮ್ಮ ಅವರು ಸಭೆಯ ಗಮನಕ್ಕೆ ತಂದರು.
ಕಳೆದ ವರ್ಷ ಚೆನ್ನಯ್ಯನ ಕೋಟೆ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿದ ರಸ್ತೆ ಕಾಮಗಾರಿ ಬಿರುಕು ಬಿಟ್ಟಿದೆ. ಈ ಕುರಿತು ಪತ್ರಿಕೆಯಲ್ಲಿ ವರದಿಯಾಗಿದ್ದು, ಈ ಸಂಬಂಧ ಸೂಕ್ತ ತನಿಖೆಯಾಗಬೇಕು ಎಂದು ಬಾಂಡ್ ಗಣಪತಿ ಅವರು ಒತ್ತಾಯಿಸಿದರು.
ಗೋಣಿಕೊಪ್ಪ, ಪೊನ್ನಂಪೇಟೆ, ಅರುವತ್ತೊಕ್ಲು ಕಸ ವಿಲೇವಾರಿ ಸಂಬಂಧ ಏಪ್ರಿಲ್, ೦೧ ರಿಂದ ನಿರ್ದಿಷ್ಟ ಸ್ಥಳ ಗುರುತಿಸುವಂತಾಗಬೇಕು ಎಂದು ಬಾಂಡ್ ಗಣಪತಿ ಅವರು ಒತ್ತಾಯಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಬಿ.ಭಾರತೀಶ್ ಟಿ.ಪಿ.ಸಂದೇಶ್, ಸದಸ್ಯರಾದ ಬಿದ್ದಂಡ ಉಷಾ ದೇವಮ್ಮ, ಎಚ್.ಎಂ.ಕಾವೇರಿ, ಕೇಚಮಾಡ ಸರಿತಾ ಪೂಣಚ್ಣ, ಇಂದಿರಮ್ಮ, ಎಂ.ಎಸ್.ವೆಂಕಟೇಶ್, ಶಕುಂತಲಾ ರವೀಂದ್ರ ಮತ್ತಿತರರು ಹಲವು ವಿಚಾರಗಳ ಕುರಿತು ವಿಷಯ ಪ್ರಸ್ತಾಪಿಸಿ ಗಮನ ಸೆಳೆದರು.
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಧನಕ್ಕೆ ಶ್ರದ್ಧಾಂಜಲಿ
ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅವರ ಅಕಾಲಿಕ ಮರಣಕ್ಕೆ ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿ.ಪಂ.ಸಿಇಓ ಎಂ.ಕೂರ್ಮಾರಾವ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಮಲ್ಲಿಕಾರ್ಜುನಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಪದ್ಮಯ್ಯ ನಾಯಕ್, ಕೃಷಿ ಇಲಾಖೆ ಉಪ ನಿರ್ದೇಶಕರಾದ ಎಂ.ತಿರುಮಲೇಶ್, ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಫೀಸ್ ಅಹಮ್ಮದ್, ಐಟಿಡಿಪಿ ಇಲಾಖೆ ಅಧಿಕಾರಿ ಸತೀಶ್, ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಂ.ರವಿಕುಮಾರ್, ತಹಶೀಲ್ದಾರ್ ಕುಂಞಮ್ಮ, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.

ಶ್ರದ್ಧಾಂಜಲಿ ಸಲ್ಲಿಸುವ ಮೊದಲು ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಬಳಿಕ ಕೋಟೆ ಆವರಣದವರೆಗೆ ತೆರಳಿ ಭೂದಾಖಲೆಗಳ ಉಪ ನಿರ್ದೇಶಕರಾದ ಮಲ್ಲಿಕಾರ್ಜುನಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಓ ಎಂ.ಕೂರ್ಮಾರಾವ್ ಅವರು ಕಂದಾಯ ಅದಾಲತ್, ಪೋಡಿ ಅದಾಲತ್ ಮತ್ತಿತರ ಕಾರ್ಯಕ್ರಮಗಳ ಪ್ರಾರಂಭಕ್ಕೆ ಡಿ.ಕೆ.ರವಿ ಅವರ ಕೊಡುಗೆ ಅಪಾರ. ಡಿ.ಕೆ.ರವಿ ಅವರು ಒಬ್ಬ ಕ್ರಾಂತಿಕಾರಿ ಮಾದರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಅವರು ಸ್ಮರಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪದ್ಮಯ್ಯ ನಾಯಕ್ ಅವರು ಮಾತನಾಡಿ ಕೊಪ್ಪಳ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಡಿ.ಕೆ.ರವಿ ಅವರು ಜಿ.ಪಂ.ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು. ಇವರ ದಕ್ಷತೆ, ಪ್ರಾಮಾಣಿಕತೆ, ಕಾರ್ಯಕ್ರಮಗಳ ಅನುಷ್ಠಾನವು ಜನಸಾಮಾನ್ಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದವು ಎಂದರು.
ಜಿ.ಪಂ.ಶ್ರೀನಿವಾಸ ರಾವ್ ಅವರು ಮಾತನಾಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಡಿ.ಕೆ.ರವಿ ಅವರು ಮಾದರಿ ಎಂದು ಅವರು ಹೇಳಿದರು. ಕೃಷಿ ಇಲಾಖೆ ಉಪ ನಿರ್ದೇಶಕರಾದ ಎಂ.ತಿರುಮಲೇಶ್ ಅವರು ಮಾತನಾಡಿದರು. ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತಿತರರು ಇದ್ದರು.

Leave a Reply


ಸುಭಾಷಿತ

ನಿನ್ನೆ ಸತ್ತಿಹುದೀಗ, ನಾಳೆ ಹುಟ್ಟದೇ ಇರಬಹುದು, ಇಂದು ಸೊಗಸಿರುವುದು, ಅದನ್ನು ಯಾಕೆ ಮರೆಯಬೇಕು.

-ಉಮರ್ ಖಯ್ಯಾದ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top