Fri 12 Jan 2018, 7:14AM

468X60

ಜಲಪಾತದಲ್ಲಿ ಮುಳುಗಿ ಸಾವು

Monday, April 20th, 2015 | Suddi Belthangady | no responses

    didupe falls 1   didupe fallsಬೆಳ್ತಂಗಡಿ: ತಾಲೂಕಿನ ದಿಡುಪೆ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಜಲಪಾತಕ್ಕೆ ಸ್ನೇಹಿತರೊಂದಿಗೆ ತೆರಳಿದ ಧನುಷ್ ಆಚಾರ್ಯ (೨೩ವ) ಎಂಬ ಯುವಕ ನೀರಿನಲ್ಲಿ ಮುಳುಗಿ ಎ.೧೯ರಂದು ಮೃತಪಟ್ಟಿದ್ದಾರೆ.
ಪಡುಬಿದ್ರೆ ಶ್ರೀದುರ್ಗಾ ನಿವಾಸಿ ಧನುಷ್ ಆಚಾರ್ಯ ತನ್ನ ಸಂಬಂಧಿಕರಾದ ಶಶಾಂಕ್, ಶಿವ ಎಂಬುವರ ಜತೆ ಗುರುವಾಯನಕೆರೆಯ ಸಂಬಂಧಿಕರ ಮನೆಗೆ ಬಂದು ಧರ್ಮಸ್ಥಳಕ್ಕೆ ತೆರಳಿದ್ದು, ಜಲಪಾತ ನೋಡಲು ಹೋಗಿದ್ದರು. ಅಲ್ಲಿ ನೀರಿಗೆ ಇಳಿದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ಈಜು ಬಾರದ ಕಾರಣ ಮುಳುಗಿದ್ದರು. ಸ್ನೇಹಿತರು ಅವರನ್ನು ನೀರಿನಿಂದ ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರು ಬಂಟಕಲ್‌ನಲ್ಲಿ ಗ್ರಾನೈಟ್ ಫ್ಯಾಕ್ಟರಿಯೊಂದರಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಮತ್ತು ಇಬ್ಬರು ಸಹೋದರಿಯರೊಂದಿಗೆ ವಾಸ ಮಾಡುತ್ತಿದ್ದರು. ಧನುಷ್ ತಂದೆ ಒಂದೂವರೆ ವರ್ಷದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top