Thu 18 Jan 2018, 7:38PM

468X60

ರಾಷ್ಟ್ರಗೀತೆ ಅರ್ಧಕ್ಕೆ ಮೊಟಕು!

Sunday, November 1st, 2015 | webnews | no responses

ಉತ್ತರಪ್ರದೇಶದ ರಾಜಭವನದಲ್ಲಿ ನಡೆದ ಸಚಿವರ ಪ್ರಮಾಣವಚನ ಕಾರ್ಯಕ್ರಮ ಅಂತ್ಯದಲ್ಲಿ ರಾಷ್ಟ್ರಗೀತೆ ಹಾಡುತ್ತಿರುವಾಗ ಅರ್ಧಕ್ಕೆ ನಿಲ್ಲಿಸಲು ಸೂಚಿಸಿದ ಉತ್ತರಪ್ರದೇಶ ರಾಜ್ಯಪಾಲ ರಾಮ್‌ನಾಯ್ಕ್ ಅವರ ಕ್ರಮ ವಿವಾದಕ್ಕೀಡಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡುತ್ತಿರುವಾಗ ರಾಮ್‌ನಾಯ್ಕ್ ಅವರು ತಮ್ಮ ಸಿಬ್ಬಂದಿಗೆ ಜನಗಣ ಮನ ಗೀತೆಯನ್ನು ನಿಲ್ಲಿಸುವಂತೆ ಸೂಚಿಸಿ, ಬಳಿಕ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಸ್ವೀಕರಿಸುವಂತೆ ತಿಳಿಸಿದ್ದರು. ಸಣ್ಣ ಗೊಂದಲದಿಂದಾಗಿ ಈ ಘಟನೆ ನಡೆದಿದೆ. ರಾಷ್ಟ್ರಗೀತೆಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ ಎಂದು ರಾಜಭವನದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಾಜ್ಯಪಾಲರು ಘಟನೆ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top