Sat 13 Jan 2018, 7:17PM

468X60

ಕೋಡಿಂಬಾಡಿ ಜಯಕರ್ನಾಟಕ ಘಟಕದಿಂದ ವಿಶಿಷ್ಠ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ, ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ; ಕ್ಯಾನ್ಸರ್ ಪೀಡಿತೆಗೆ ಧನ ಸಹಾಯ

Sunday, November 1st, 2015 | suddiputtur | no responses

DSC_2907

DSC_2901

DSC_2915

DSC_28980

ಚಿತ್ರ: ಅಶ್ವಿನಿ ಪುತ್ತೂರು

ಪುತ್ತೂರು: ಜಯಕರ್ನಾಟಕ ಕೋಡಿಂಬಾಡಿ ಘಟಕದ ವತಿಯಿಂದ ಕೋಡಿಂಬಾಡಿ ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಮತ್ತು ಕ್ಯಾನ್ಸರ್ ಪೀಡಿತೆಗೆ ಧನಸಹಾಯ ಮಾಡುವುದರ ಮೂಲಕ ವಿಶಿಷ್ಠ ರೀತಿಯಲ್ಲಿ ನ.೧ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜಯಕರ್ನಾಟಕದ ಪುತ್ತೂರು ತಾಲೂಕು ಘಟಕದ ಗೌರವಾಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಕೋಡಿಂಬಾಡಿ ಹಿ. ಪ್ರಾ. ಶಾಲೆಯ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಪೆನ್ ಮುಂತಾದ ಪರಿಕರಗಳನ್ನು ವಿತರಿಸಲಾಯಿತು. ತಾಲೂಕು ಘಟಕದ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರೋಶನ್ ರೆಬೆಲ್ಲೋ, ಕಾರ್ಯದರ್ಶಿ ಲಕ್ಷ್ಮಣ ಸಂಪ್ಯ,, ಕಾರ್ಯದರ್ಶಿ ರಫೀಕ್.ಎಂ.ಕೆ, ಕೋಡಿಂಬಾಡಿ ಗ್ರಾ. ಪಂ. ಉಪಾಧ್ಯಕ್ಷ ಬಾಬು ಗೌಡ ಭಂಡಾರದಮನೆ, ಮಾಜಿ ಅಧ್ಯಕ್ಷ ಎ. ಮುರಳೀಧರ ರೈ ಮಠಂತಬೆಟ್ಟು, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಸಿಆರ್‌ಪಿ ದೇವಿಕಾ ಬನ್ನೂರು, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀಶ್ ಕುಮಾರ್ ಬಾರ್ತಿಕುಮೇರು ಮತ್ತು ಕೋಡಿಂಬಾಡಿ ಜಯಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ್ ಪ್ರಭು ದಾರಂದಕುಕ್ಕು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ವಿಕ್ರಂ ಶೆಟ್ಟಿ ಅಂತರ ಸ್ವಾಗತಿಸಿ, ತಾಲೂಕು ಘಟಕ ಕಾರ್ಯದರ್ಶಿಯಾದ ಗ್ರಾ. ಪಂ. ಮಾಜಿ ಸದಸ್ಯ ಜಯಪ್ರಕಾಶ್ ಬದಿನಾರು ವಂದಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು. ಕ್ಯಾನ್ಸರ್‌ನಿಂದ ಬಳಲುತ್ತಿರುವ ಸೇಡಿಯಾಪಿನ ಮಹಿಳೆಯೋರ್ವರಿಗೆ ಕೋಡಿಂಬಾಡಿ ಜಯಕರ್ನಾಟಕ ಘಟಕದ ವತಿಯಿಂದ ಸಭಾ ಕಾರ್ಯಕ್ರಮದ ಬಳಿಕ ಧನ ಸಹಾಯ ಮಾಡಲಾಯಿತು.

Leave a Reply


ಸುಭಾಷಿತ

ಧರ್ಮಗಳು ಆನಂದಗೊಳಿಸುವಂತಹ ದ್ವೀಪಗಳು,  ಆತ್ಮ ಮತ್ತು ಸ್ಪೂರ್ತಿಯ ತಾಣಗಳು.

– ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top