Thu 18 Jan 2018, 5:25PM

468X60

ಗೌಡ ಸಮುದಾಯ ಭವನಕ್ಕೆ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ

Saturday, November 28th, 2015 | sulliaeditor | no responses

sullia niyoga siddaramayyanavarige manavi.jpg2 copy sullia niyoga siddaramayyanavarige manavi.jpg3 copy

ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲ ಬೈಲಿನಲ್ಲಿ ನೂತನವಾಗಿ ನಿರ್ಮಿಸುತ್ತಿರುವ  ಗೌಡ ಸಮುದಾಯ ಭವನಕ್ಕೆ 170 ಲಕ್ಷ ಅನುದಾನವನ್ನು ಬಿಡುಗಡೆ ಮಾಡುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ. ಕೆ.ಪಿ.ಸಿ.ಸಿ ಸದಸ್ಯ ಡಾ| ಬಿ. ರಘು, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ, ಬ್ಲಾಕ್ ನ ಮಾಜಿ ಅಧ್ಯಕ್ಷರುಗಳಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ಪದಾಧಿಕಾರಿಗಳಾದ ಪಿ.ಸಿ.ಜಯರಾಮ, ಎಂ.ಮಾಧವ ಗೌಡ, ಸುರೇಶ್ ಎಂ.ಹೆಚ್., ಜಗದೀಶ್ ಪಡ್ಪು, ದಿನೇಶ್ ಮಡ್ತಿಲ ಮೊದಲಾದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅನುಗ್ರಹ ನಿವಾಸದಲ್ಲಿ ಭೇಟಿ ಮಾಡಿದರು.
ಶೀಘ್ರವೇ ಅನುದಾನ ಬಿಡುಗಡೆಯನ್ನು ತ್ವರಿತಗತಿಯಲ್ಲಿ ಮಾಡಿ ಕಾಮಗಾರಿ ಪೂರ್ಣಗೊಳಿಸಲು ಆದೇಶಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಉಸ್ತುವಾರಿ ಸಚಿವರು ನಿಯೋಗದೊಂದಿಗೆ ಒತ್ತಾಯಿಸಿರುವುದಾಗಿ ತಿಳಿದು ಬಂದಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top