Sun 21 Jan 2018, 2:04PM

468X60

ಹೆಡ್ಲಿ ವಿಚಾರಣೆ ಮುಂದೂಡಿಕೆ

Wednesday, February 10th, 2016 | webnews | no responses

ತಾಂತ್ರಿಕ ಸಮಸ್ಯೆಯಿಂದಾಗಿ ಪಾಕಿಸ್ತಾನ ಮೂಲದ ಅಮೆರಿಕ ಉಗ್ರ ಡೇವಿಡ್ ಹೆಡ್ಲಿ ಅವರ ವಿಚಾರಣೆ ಬುಧವಾರ ನಡೆಯಲಿಲ್ಲ. ಕೋರ್ಟ್ ವಿಚಾರಣೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿತು. ಅಮೆರಿಕದ ಅಜ್ಞಾತ ಸ್ಥಳದಿಂದ ಸತತ ಮೂರನೆಯ ದಿನವೂ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಂಬೈ ವಿಶೇಷ ನ್ಯಾಯಾಲಯದ ವಿಚಾರಣೆಯಲ್ಲಿ ಹೆಡ್ಲಿ ಭಾಗವಹಿಸಿದರು. ಆದರೆ, ಅಮೆರಿಕದ ಕಡೆಯಿಂದ ವಿಡಿಯೊ ಕಾನ್ಫರೆನ್ಸ್ ಲಿಂಕ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿತು. ತಂತ್ರಜ್ಞರು ಈ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಶ್ರಮವಹಿಸಿದರೂ ಸಾಧ್ಯವಾಗಲಿಲ್ಲ. ಹೀಗಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top