Sun 15 Oct 2017, 10:00PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ರಬ್ಬರ್ ಬೆಳೆಗಾರರ ರಕ್ಷಣೆಗೆ ಒತ್ತಾಯಿಸಿ ಸುಳ್ಯ ಬಿಜೆಪಿಯಿಂದ ವಾಣಿಜ್ಯ ಸಚಿವರಿಗೆ ಮನವಿ

Friday, June 10th, 2016 | sulliaeditor | no responses

ರಬ್ಬರ್ ಧಾರಣೆ ಕಳೆದ 2 ವರ್ಷಗಳಿಂದ ಕುಸಿತವಾಗಿದ್ದು ರಬ್ಬರ್ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಂ ಅವರಿಗೆ ಮನವಿ ಮಾಡಿದೆ.
ರಬ್ಬರ್ ಧಾರಣೆ ಕಳೆದ 2 ವರ್ಷಗಳಿಂದ ಕುಸಿತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕಾಗಿದೆ ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯಿಸಿದೆ
ಈ ಸಂದರ್ಭ ಸುಳ್ಯ ಶಾಸಕ ಎಸ್ ಅಂಗಾರ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎವಿ ತೀರ್ಥರಾಮ, ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲ, ಪ್ರಧಾನ ಕಾರ್ಯದರ್ಶಿ ಮುಳಿಯ ಕೇಶವ ಭಟ್,ಮಾಜಿ ಎಂಎಲ್‌ಸಿ ಮೋನಪ್ಪ ಭಂಡಾರಿ, ಜಿಪಂ ಸದಸ್ಯರುಗಳಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಬಿಜೆಪಿ ಮುಖಂಡ ಪಿಜಿಎಸ್‌ಎನ್ ಪ್ರಸಾದ್, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿಪಂ ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top