14 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ

0

ಪಂಜಕ್ಕೆ ತಹಶೀಲ್ದಾರ್, ತೊಡಿಕಾನಕ್ಕೆ ಬಿ.ಇ.ಓ.

ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಮಲ್ಲಿಕಾರ್ಜುನ, ಪಂಜ ಸೀಮೆಯ ಪಂಜ ಪಂಚಲಿಂಗೇಶ್ವರ ದೇವಸ್ಥಾನಗಳ ಸಹಿತ 14 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಅವಧಿ‌ ಮುಕ್ತಾಯಗೊಂಡಿದ್ದು ಆ ದೇವಸ್ಥಾನಗಳಿಗೆ ಆಡಳಿತಾಧಿಕಾರಿ ಗಳನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.

ತೊಡಿಕಾನ ಶ್ರೀ‌ಮಲ್ಲಿಕಾರ್ಜುನ ದೇವಸ್ಥಾನದ ಆಡಳಿತಾಧಿಕಾಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಸುಳ್ಯ ತಹಶೀಲ್ದಾರ್, ನಾಲ್ಕೂರು ಶ್ರೀ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಲ್ಕೂರು ಗ್ರಾಮ ಕರಣಿಕರು, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಐವರ್ನಾಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಶ್ರೀ ರಾಜನ್ ದೈವ ಪುರುಷಭೂತ ದೇವಸ್ಥಾನದ ಆಡಳಿತಾಧಿಕಾರಿ ಗುತ್ತಿಗಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪೆರುವಾಜೆ ಶ್ರೀ ಜಲದುರ್ಗಾ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸುಳ್ಯ ಶ್ರೀ ‌ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಆಡಳಿತಾಧಿಕಾರಿ ಸುಳ್ಯದ‌ ಉಪತಹಶೀಲ್ದಾರ್, ಉಬರಡ್ಕ ಮಿತ್ತೂರು ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದ ಆಡಳಿತಾಧಿಕಾರಿ ಉಬರಡ್ಕ ಗ್ರಾಮ ಕರಣಿಕರು, ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜಾಲ್ಸೂರು ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಐವತ್ತೊಕ್ಲು ಪೈಂದೋಡಿ ಸುಬ್ರಾಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಂಜ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮುರುಳ್ಯ ಶ್ರೀ ಗಣಪತಿ ಮಲ್ಲಿಕಾರ್ಜುನ ದೇವಸ್ಥಾನದ ಆಡಳಿತಾಧಿಕಾರಿಗಳಾಗಿ ಮುರುಳ್ಯ ಗ್ರಾಮ ಕರಣಿಕರು, ಮರ್ಕಂಜ ‌ಕಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮ ಕರಣಿಕರು, ಏನೆಕಲ್ಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸುಬ್ರಹ್ಮಣ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಬಳ್ಪ ಗ್ರಾಮದ ಶ್ರೀ ನೇರ್ಪು ರಾಜನ್ ದೈವಸ್ಥಾನದ ಆಡಳಿತಾಧಿಕಾರಿಯಾಗಿ ಬಳ್ಪ ಗ್ರಾಮಕರಣಿಕರನ್ನು‌ ನೇಮಕಗೊಳಿಸಲಾಗಿದೆ.