Sat 14 Oct 2017, 5:13AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸುಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ

Sunday, October 8th, 2017 | sulliaeditor | no responses

ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಅ.೮ರಂದು ನಡೆದ ಬೃಹತ್ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಭಾ.ಜ.ಪಾ. ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಮಾತನಾಡಿದರು.
ಸುಳ್ಯ ತಾಲೂಕು ಭಾ.ಜ.ಪಾ. ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಶೋಭಾ ನಲ್ಲೂರಾಯ ಅಧ್ಯಕ್ಷತೆ ವಹಿಸಿದ್ದರು. ದೀಪ ಬೆಳಗಿಸುವ ಹಾಗೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಶಾಸಕ ಎಸ್.ಅಂಗಾರ, ಭಾ.ಜ.ಪಾ.ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ರೇಖಾ ಹುಲಿಯಪ್ಪ ಗೌಡ, ಲೋಕಸಭಾ ಸಂಸದ ನಳಿನ್‌ಕುಮಾರ್ ಕಟೀಲು, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಜಿ.ಪಂ. ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ದ.ಕ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂಜಾ ಪೈ, ಕಾರ್ಯದರ್ಶಿ ಶ್ರೀಮತಿ ಸಂಧ್ಯಾ, ಜಿ.ಪಂ. ಸದಸ್ಯರುಗಳಾದ ಶ್ರೀಮತಿ ಪುಷ್ಪಾವತಿ ಬಾಳಿಲ, ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ಸದಸ್ಯೆ ಶ್ರೀಮತಿ ಹರಿಣಾಕ್ಷಿ, ಭಾಗೀರಥಿ ಮುರುಳ್ಯ, ಎ.ವಿ.ತೀರ್ಥರಾಮ, ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಶುಭದಾ ರೈ, ಶ್ರೀಮತಿ ಸುಕನ್ಯಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಶೋಭಾ ನಲ್ಲೂರಾಯ ಸ್ವಾಗತಿಸಿ, ಶ್ರೀಮತಿ ಪುಲಸ್ಯ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಜಯಂತಿ ಜನಾರ್ದನ ಅಜ್ಜಾವರ ವಂದಿಸಿದರು. ಶ್ರೀಮತಿ ಸರೋಜಿನಿ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top