ಸುದ್ದಿ ಕೃಷಿ ಸೇವಾ ಕೇಂದ್ರದ ವತಿಯಿಂದ ಅಣಬೆ ತರಬೇತಿ ಕಾರ್ಯಗಾರ

0

ಸುದ್ದಿ ಮಾಹಿತಿ ಟ್ರಸ್ಟ್ (ರಿ) ಹಾಗೂ ಸುದ್ದಿ ಕೃಷಿ ಸೇವಾ ಕೇಂದ್ರದ ವತಿಯಿಂದ ಅಣಬೆ ತರಬೇತಿ ಕಾರ್ಯಗಾರ ಸುಳ್ಯದ ರಂಗಮಯೂರಿ ಕಲಾ ಶಾಲೆಯಲ್ಲಿ ಮಾ. 11 ರಂದು ನಡೆಯಿತು.

ಕಾರ್ಯಕ್ರಮವನ್ನು ಸುಳ್ಯ ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿಶ್ವನಾಥ ಬಿಳಿಮಲೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಂಗಮಯೂರಿಯ ನಿರ್ದೇಶಕ ಲೋಕೇಶ್ ಊರುಬೈಲ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಶ್ರೀಮತಿ ಲತಾ ದೇವಿಪ್ರಸಾದ್ ಕುದ್ಪಾಜೆ ತರಬೇತಿ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಸುಮಾರು 35 ಕ್ಕೂ ಹೆಚ್ಚು ಆಸಕ್ತರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಕಾರ್ಯಕ್ರಮ ನಿರೂಪಿಸಿದರು. ಸುದ್ದಿ ಕೃಷಿ ಸೇವಾ ಕೇಂದ್ರದ ನಿರ್ವಹಕಿ ಶ್ರೀಮತಿ ರಮ್ಯಾ ಸತೀಶ್ ಕಳಂಜ ಸ್ವಾಗತಿಸಿದರು.