ಮಾ.21 – 23: ಅಡ್ಕಾರು ಅಂಬಾಡಿಮೂಲೆಯಲ್ಲಿ ಶ್ರೀ ವಿಷ್ಣುಮೂರ್ತಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ಕೋಲ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಬಾಡಿಮೂಲೆಯಲ್ಲಿ ನವೀಕರಣಗೊಂಡ ದೈವಸ್ಥಾನದಲ್ಲಿ ನಾರಾಯಣ ಬೆಳ್ಚಪ್ಪಾಡ ನಾರಂಪಾಡಿ ಅವರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ಕೋಲವು ಮಾ.21ರಿಂದ 23ರವರೆಗೆ ಜರುಗಲಿದೆ.

ಮಾ.21ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ, ಸಂಜೆ ಕುತ್ತಿಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ. ಮಾ.22ರಂದು ಬೆಳಿಗ್ಗೆ ಸ್ಥಳಶುದ್ಧಿ, ಗಣಪತಿ ಹೋಮ, ಪೂರ್ವಾಹ್ನ ಶ್ರೀ ವಿಷ್ಣುಮೂರ್ತಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠೆ , ಪ್ರಸಾದ ವಿತರಣೆ , ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.

ಸಂಜೆ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಭಜನಾ ಮಂಡಳಿ ಹಾಗೂ ಕಲಾಕೇಸರಿ ಭಜನಾ ತಂಡದಿಂದ ಭಜನಾ ಸೇವೆ, ದೀಪಾರಾಧನೆ, ಶ್ರೀ ವಿಷ್ಣುಮೂರ್ತಿ ದೈವದ ಹೊಸ್ತು ಸೇವೆ, ಬಳಿಕ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆದು, ದೈವದ ತೊಡಂಙಲ್ ನಡೆಯಲಿದೆ.


ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಾಲ್ಸೂರಿನವರಾಗಿದ್ದು, ಗುಜರಾತಿನಲ್ಲಿ ಉದ್ಯಮಿಯಾಗಿರುವ ಗ್ರೀನ್ ಹೀರೋ ಆಫ್ ಇಂಡಿಯಾದ ಆರ್.ಕೆ. ನಾಯರ್ ಎರ್ಮೆಕ್ಕಾರು ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.


ರಾತ್ರಿ ಅನ್ನಸಂತರ್ಪಣೆ ಬಳಿಕ ಶ್ರೀ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಲಿದೆ. ಮಾ.23ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಅಪರಾಹ್ನ ಗುಳಿಗ ದೈವದ ಕೋಲ, ಪ್ರಸಾದ ವಿತರಣೆ ಜರುಗಲಿದೆ.